alex Certify ಇಂದಿನಿಂದ 14 ದಿನ ಮತ್ತೊಂದು ಹಂತದ ಕಠಿಣ ಲಾಕ್ ಡೌನ್: ಬೆಳಗ್ಗೆ ಮಾತ್ರ ಅಗತ್ಯ ವಸ್ತು ಖರೀದಿ –ಬೇಕಾಬಿಟ್ಟಿ ಸಂಚರಿಸುವವರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 14 ದಿನ ಮತ್ತೊಂದು ಹಂತದ ಕಠಿಣ ಲಾಕ್ ಡೌನ್: ಬೆಳಗ್ಗೆ ಮಾತ್ರ ಅಗತ್ಯ ವಸ್ತು ಖರೀದಿ –ಬೇಕಾಬಿಟ್ಟಿ ಸಂಚರಿಸುವವರಿಗೆ ಬಿಗ್ ಶಾಕ್

 ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ಡೌನ್ ಜಾರಿಯಲ್ಲಿದೆ.

ಮೇ 24 ರಂದು 6 ಬೆಳಗ್ಗೆ ಗಂಟೆಯವರೆಗೆ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಜೂನ್ 7 ರವರೆಗೆ ವಿಸ್ತರಿಸಲಾಗಿದೆ. ಕಟ್ಟುನಿಟ್ಟಾಗಿ ಲಾಕ್ ಡೌನ್ ಅನುಷ್ಠಾನಕ್ಕೆ ಪೊಲೀಸರು ಸ್ಥಳೀಯ ಆಡಳಿತಗಳಿಂದ ಕ್ರಮಕೈಗೊಳ್ಳಲಾಗಿದೆ. ಅನಗತ್ಯವಾಗಿ ಸಂಚರಿಸುವವರಿಗೆ ಬ್ರೇಕ್ ಹಾಕಲಾಗುತ್ತಿದ್ದು, ವಾಹನ ವಶ, ದಂಡ ವಸೂಲಿ ಸೇರಿ ಅನೇಕ ಕ್ರಮ ಕೈಗೊಳ್ಳಲಾಗುತ್ತಿದೆ.

ರಾಜ್ಯಾದ್ಯಂತ ಬೆಳಗ್ಗೆ 6 ರಿಂದ 10  ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ಆಯಾ ಜಿಲ್ಲೆಗಳಲ್ಲಿ ಬದಲಾವಣೆಗೆ ಒಳಪಟ್ಟಿದೆ. ಕೆಲವು ಕಡೆ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಎರಡು ದಿನ, ಮೂರು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಬೆಳಗ್ಗೆ 6 ರಿಂದ 8 ಗಂಟೆಯವರೆಗೆ, 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...