alex Certify BIG NEWS: ಕೊರೋನಾ ತಡೆಗೆ ಹಲವು ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್, ಅನಗತ್ಯವಾಗಿ ಓಡಾಡುವವರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ತಡೆಗೆ ಹಲವು ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್, ಅನಗತ್ಯವಾಗಿ ಓಡಾಡುವವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಅನೇಕ ಜಿಲ್ಲೆಗಳಲ್ಲಿ ಕೊರೋನಾ ತೀವ್ರ ಹೆಚ್ಚಳವಾದ ಹಿನ್ನೆಲೆಯಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಮಾಡಲಾಗಿದೆ.

ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮೇ 19 ರಂದು ಬೆಳಗ್ಗೆ 10 ಗಂಟೆಯಿಂದ 24 ರ ಬೆಳಗ್ಗೆ 6 ಗಂಟೆಯವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅನಗತ್ಯವಾಗಿ ಜನ ಓಡಾಡಿದರೆ ಪ್ರಕರಣ ದಾಖಲಿಸಲಾಗುತ್ತದೆ.

ರಾಯಚೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಮುಂದುವರೆಯಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರದವರೆಗೆ ಲಾಕ್ಡೌನ್ ಮುಂದುವರೆಯಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆ ಹೊರತಾಗಿ ಉಳಿದೆಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

ಕಲಬುರ್ಗಿ ಜಿಲ್ಲೆಯಲ್ಲಿ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಮೇ 20 ರಂದು ಬೆಳಗ್ಗೆ 6 ಗಂಟೆಯಿಂದ ಮೇ 23ರಂದು ಬೆಳಗ್ಗೆ 6 ಗಂಟೆಯವರೆಗೆ ಅತ್ಯಗತ್ಯ ಸೇವೆ ಹೊರತಾಗಿ ಎಲ್ಲಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಲ್ಲಾ ರೀತಿಯ ಸರಕು ಸಾಗಾಣಿಕೆಗೆ ಅನುಮತಿ ಇದೆ.

ಕೃಷಿ ಸಂಬಂಧಿತ ಚಟುವಟಿಕೆಗಳು ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಅನುಮತಿಸಿದೆ. ಬೀಜ, ರಸಗೊಬ್ಬರ, ಸಾಗಾಣಿಕೆ ಸಂಬಂಧ ರೈಲ್ವೆ ರೇಕ್‌ಗಳಲ್ಲಿ ಕಾರ್ಮಿಕರಿಗೆ ಅನುಮತಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಂಗಡಿ ಮುಂಗಟ್ಟುಗಳಿಗೆ ಅನುಮತಿ ಇರುವುದಿಲ್ಲ. ಆಹಾರ ಸಂಸ್ಕರಣೆಯ ಸೇವೆಗಳಾದ ಕೋಲ್ಡ್ ಸ್ಟೋರೇಜ್‌ಗಳು, ಔಷಧ ಉದ್ಯಮಗಳು, ರಾಸಾಯನಿಕ ಉದ್ಯಮಗಳಲ್ಲಿ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಖಾನಾವಳಿ-ಹೋಟೆಲ್‌ಗಳಿಂದ ಮನೆ-ಮನೆಗೆ ಪಾರ್ಸಲ್ ಮೂಲಕ ಊಟ-ಉಪಹಾರ ಸರಬರಾಜು ಮಾಡಲು ಅವಕಾಶ ಕಲ್ಪಿಸಲಾಗಿದೆ. ನಗರ-ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟಿನ್ ದಿನ ಪೂರ್ತಿ ತರೆಯಲು ಅನುಮತಿಸಿದೆ. ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರುಗಳು ಆಸ್ಪತ್ರೆಗಳಲ್ಲಿ ರೋಗಿಗಳನ್ನು ನೋಡಿಕೊಳ್ಳುವವರಿಗೆ ಊಟದ ವ್ಯವಸ್ಥೆಯನ್ನು ಮಾಡಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...