ಬೆಂಗಳೂರು: ಕೊರೊನಾ ಸೋಂಕು ತಡೆಯಲು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ನಾಳೆಯಿಂದ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅದೇ ರೀತಿ ಜುಲೈ 5ರಿಂದ ಭಾನುವಾರ ಕಂಪ್ಲೀಟ್ ಲಾಖ್ ಡೌನ್ ಜಾರಿ ಮಾಡಲಾಗುವುದು.
ಜುಲೈ 10 ರಿಂದ ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳು ವಾರದಲ್ಲಿ 5 ದಿನಗಳ ಕಾಲ ಕಾರ್ಯನಿರ್ವಹಿಸಲಿವೆ. ಶನಿವಾರ ರಜೆ ನೀಡಿ ವಾರದ ಕೆಲಸದ ದಿನಗಳನ್ನು 5 ದಿನಗಳಿಗೆ ಇಳಿಕೆ ಮಾಡಲಾಗುವುದು ಎಂದು ಹೇಳಲಾಗಿದೆ.
ಸದ್ಯ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿದ್ದು, ಒಂದು ಗಂಟೆ ಕಡಿತ ಮಾಡಲಾಗುವುದು. ಅಗತ್ಯ ಸೇವೆ, ಅಗತ್ಯ ವಸ್ತು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಿದ್ದು, ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಲಾಗಿದೆ.