
ಮುಂಬೈ: ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 25,833 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಅತಿ ಹೆಚ್ಚು ಏಕದಿನದ ಏರಿಕೆ ಕಂಡ ಒಂದು ದಿನದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕುರಿತು ಮಹತ್ವದ ಮಾಹಿತಿ ನೀಡಿದ್ದು ಲಾಕ್ಡೌನ್ ಒಂದು ಆಯ್ಕೆಯಾಗಿದೆ ಎಂದು ಹೇಳಿದ್ದಾರೆ.
ಜನರು ಮಾಸ್ಕ್ ಧರಿಸುವುದು ಸೇರಿದಂತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಮಿತಿಮೀರಿದ್ದು ಗುರುವಾರ ಒಂದೇ ದಿನ 25 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗಿವೆ. ನಮ್ಮ ಮುಂದಿರುವ ಆಯ್ಕೆ ಎಂದರೆ ಲಾಕ್ಡೌನ್ ಎಂದು ಅವರು ತಿಳಿಸಿದ್ದು, ಜನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.