ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ್ ಲಾಕ್ ಡೌನ್ ಮುಂದುವರೆಸಲಾಗಿದೆ. ಮೇ 24 ರಿಂದ ಜೂನ್ 7 ರವರೆಗೆ ರಾಜ್ಯದಲ್ಲಿ ಕಠಿಣ ನಿರ್ಬಂಧ ಮುಂದುವರೆಯಲಿದೆ. ಮಾರ್ಗಸೂಚಿಯಲ್ಲಿ ಬದಲಾವಣೆ ಇರುವುದಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು.
ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ಇದೆ. 9.45 ರ ಒಳಗೆ ಜನ ಖರೀದಿ ಮುಗಿಸಿ ಮನೆಗೆ ಸೇರಬೇಕು. ನಂತರ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದಾರೆ. ಅನಗತ್ಯವಾಗಿ ಓಡಾಡುವವರ ವಾಹನ ಸೀಜ್ ಮಾಡಲಾಗುವುದು. ಅನಗತ್ಯ ಓಡಾಕ್ಕೆ ಬ್ರೇಕ್ ಹಾಕಲು ಸಿಎಂ ಯಡಿಯೂರಪ್ಪ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.