ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ 5 ದಿನ ಕಂಪ್ಲೀಟ್ ಲಾಕ್ಡೌನ್ ಮಾಡಲಾಗುವುದು. ಎರಡು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು ಎನ್ನಲಾಗಿದೆ.
ಕೊರೊನಾ ಸೋಂಕು ತಡೆಯಲು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಿದ್ದು, ಸೋಮವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 5 ದಿನ ಜನ ಅನಗತ್ಯವಾಗಿ ಹೊರಗೆ ಬರುವಂತಿಲ್ಲ. ಹೋಟೆಲ್ ಸೇರಿದಂತೆ ಎಲ್ಲಾ ಅಂಗಡಿಗಳನ್ನು ಮುಚ್ಚಬೇಕಿದೆ. ಅನಗತ್ಯವಾಗಿ ಓಡಾಡುವವರ ವಾಹನ ಸೀಜ್ ಮಾಡಲಾಗುವುದು ಎಂದು ಹೇಳಲಾಗಿದೆ.