ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರ ಸೆಮಿ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ, ಸೋಂಕು ಹೆಚ್ಚಾಗಿರುವ ಅನೇಕ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ.
ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್, ಮೂರು ದಿನ ಸೆಮಿ ಲಾಕ್ ಡೌನ್ ಮಾಡಲು ಕ್ರಮಕೈಗೊಳ್ಳಲಾಗಿದೆ. ಅದೇ ರೀತಿ ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ರಾಯಚೂರು ಜಿಲ್ಲೆಯಲ್ಲಿ ಭಾನುವಾರದಿಂದಲೇ ಮೂರು ದಿನಗಳ ಲಾಕ್ಡೌನ್ ಆರಂಭವಾಗಿದ್ದು, ಬುಧವಾರದವರೆಗೆ ಜಾರಿಯಲ್ಲಿರಲಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುವುದಿಲ್ಲ.
ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರದಿಂದ 5 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಮೇ 19 ರಿಂದ 25 ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು. ಈ ಸಂದರ್ಭದಲ್ಲಿ ತುರ್ತು ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶವಿದೆ ಎಂದು ಹೇಳಲಾಗಿದೆ.