ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕೊರೋನಾ ಎರಡನೇ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಲಾಕ್ ಡೌನ್ ಅಥವಾ ಸೆಮಿಲಾಕ್ ಡೌನ್ ಜಾರಿ ಮಾಡುವ ಪ್ರಸ್ತಾಪ ಇಲ್ಲ. ಒಂದು ವಾರದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ಹಾಕುವುದು ಸೇರಿದಂತೆ ರಾಜ್ಯದಲ್ಲಿ ಕೊರೋನಾ ತಡೆಗೆ ಎಲ್ಲ ಕ್ರಮ, ನಿಯಮಗಳನ್ನು ಕಟ್ಟುನಿಟ್ಟಿನ ಜಾರಿಗೆ ಸೂಚಿಸಲಾಗಿದೆ.
ಶಾಲೆಗಳನ್ನು ಬಂದ್ ಮಾಡುವುದಿಲ್ಲ ಶಿಕ್ಷಣ ಸಂಸ್ಥೆಗಳ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದು, ಸೋಂಕಿತರ ಪ್ರಮಾಣ ಹೆಚ್ಚಾದರೆ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಬಂದ್ ಮಾಡಲ್ಲ ಎಂದು ಸಚಿವರು ಹೇಳಿದ್ದಾರೆ.