alex Certify ನಾಳೆಯಿಂದ 1 ವಾರ ಲಾಕ್ಡೌನ್ ಎಂದ ಸಿಎಂ ಯಡಿಯೂರಪ್ಪ ಹಳೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ 1 ವಾರ ಲಾಕ್ಡೌನ್ ಎಂದ ಸಿಎಂ ಯಡಿಯೂರಪ್ಪ ಹಳೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ನಾಳೆಯಿಂದ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಹಿಂದೆ ಹೇಳಿದ್ದ ವಿಡಿಯೋ ಈಗ ವೈರಲ್ ಆಗಿದೆ.

ಸದ್ಯ ರಾಜ್ಯದಲ್ಲಿ ಲಾಕ್ಡೌನ್ ಅಥವಾ ನೈಟ್ ಕರ್ಫ್ಯೂ ಜಾರಿಗೊಳಿಸುವ ಯಾವುದೇ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಆದರೆ, ಲಾಕ್ಡೌನ್ ಜಾರಿ ಮಾಡಲಾಗಿದೆ ಎಂದು ಅವರು ಈ ಹಿಂದೆ ಹೇಳಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ಕೊರೋನಾ ಸೋಂಕು ಹೆಚ್ಚಾಗ್ತಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ಲಾಕ್ಡೌನ್ ಜಾರಿ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಡಿಯೋದಲ್ಲಿ ಅವರ ಅಕ್ಕಪಕ್ಕದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಸಚಿವ ಶ್ರೀರಾಮುಲು ಅವರು ಇದ್ದಾರೆ. ಆಗ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. ಈಗ ಸುಧಾಕರ್ ಆ ಖಾತೆ ನಿರ್ವಹಿಸುತ್ತಿದ್ದಾರೆ. ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಲಾಕ್ಡೌನ್ ಜಾರಿ ಮಾಡಲಾಗಿದೆ ಎಂಬ ವದಂತಿ ಹರಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...