
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ದಾಳಿಯ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪ್ರತಿಷ್ಠಿತ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ. ಹೊರ ರಾಜ್ಯದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಶೌಚಾಲಯದ ಗೋಡೆಗೆ ಗೌಪ್ಯವಾಗಿ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ದಾಳಿಯ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ. ಚಿತ್ರದುರ್ಗ ಡಿಸಿಐಬಿ ಇನ್ಸ್ ಪೆಕ್ಟರ್ ಕಿರಣ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.