
ಉಡುಪಿ: ಉಡುಪಿಯ ಲಾಡ್ಜ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮಹಿಳೆಯನ್ನು ರಕ್ಷಿಸಿದ್ದಾರೆ.
ಹೋಟೆಲ್ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಉಡುಪಿಯ ಸೆನ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ದಾಳಿ ಮಾಡಿದ್ದಾರೆ. ದಾಳಿ ವೇಳೆ ಶಿವಮೊಗ್ಗ ಮೂಲದ ಮಹಿಳೆಯನ್ನು ರಕ್ಷಿಸಲಾಗಿದೆ. ಕೆಲಸ ಕೊಡಿಸುವುದಾಗಿ ಮಹಿಳೆಯನ್ನು ಕರೆದುಕೊಂಡು ಬಂದಿದ್ದ ಕೇಶವ ಎಂಬಾತ ಹೋಟೆಲ್ ನಲ್ಲಿ ಇರಿಸಿ ಬಲವಂತವಾಗಿ ಅನೈತಿಕ ಚಟುವಟಿಕೆ ದೂಡಿದ್ದ ಎನ್ನಲಾಗಿದೆ.
ದಾಳಿಯ ವೇಳೆ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದು, ಹೋಟೆಲ್ ನಲ್ಲಿ ಕೃತ್ಯಕ್ಕೆ ಅವಕಾಶ ಮಾಡಿಕೊಟ್ಟ ಮಾಲೀಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.