ಬೆಂಗಳೂರು: ಕೆಲಸಕ್ಕೆ ತೆರಳಿದ್ದ ಬಿಎಂಟಿಸಿ ಚಾಲಕ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ರಾಮನಗರದ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಮೃತಪಟ್ಟ ಬಿಎಂಟಿಸಿ ಚಾಲಕ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೊರಟಿದ್ದ ಅವರು ಕೆಂಗೇರಿ ಠಾಣೆ ಸಮೇಪದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದಕ್ಕೆ ಮೊದಲು ಲಾಡ್ಜ್ ಕೊಠಡಿ ಬಾಗಿಲು ಲಾಕ್ ಮಾಡಿಕೊಂಡು ಯುವತಿಯೊಬ್ಬಳು ಹೊರಗೆ ಹೋಗಿರುವುದು ಗೊತ್ತಾಗಿದೆ. ಶವದ ಹಣೆಯ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದು, ಅವರ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.