ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಖಾಸಗಿ ಬಸ್ ನಿಲ್ದಾಣ ಎದುರಿನ ಲಾಡ್ಜ್ ವೊಂದರಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶಿರಸಿ ಮೂಲದ ಜಿತೇಂದ್ರ ಮಹಾಬಲೇಶ್ವರ ನಾಯ್ಕ(33) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮಂಗಳವಾರ ಲಾಡ್ಜ್ ಗೆ ಬಂದ ಜಿತೇಂದ್ರ ರೂಮ್ ಮಾಡಿಕೊಂಡಿದ್ದರು. ಅವರು ಲಾಡ್ಜ್ ಕೊಠಡಿಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಸನಗರದಲ್ಲಿ ಬೇಕರಿ ವ್ಯವಹಾರ ನಡೆಸುತ್ತಿದ್ದ ಅವರು ವಿಪರೀತ ಸಾಲ ಮಾಡಿ ಕೊಂಡಿದ್ದರು ಎಂದು ಹೇಳಲಾಗಿದೆ. ಸಾಗರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.