ಬೆಂಗಳೂರು: ಸೆಪ್ಟೆಂಬರ್ 9ರ ಶನಿವಾರ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಲೋಕ್ ಅದಾಲತ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಲೋಕ್ ಅದಾಲತ್ ನಲ್ಲಿ ವ್ಯಾಜ್ಯ ಬಗೆಹರಿಸಿಕೊಳ್ಳಲು ಬಯಸುವವರಿಗಾಗಿ ಪ್ರಕರಣಗಳ ಪಟ್ಟಿ ಮಾಡಲಾಗಿದೆ. ಈ ಪಟ್ಟಿಯನ್ನು ಆಯಾ ನ್ಯಾಯಾಲಯಗಳಲ್ಲಿ ಪರಿಹರಿಸಲಾಗುತ್ತದೆ. ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ವಾಹನ ಅಪಘಾತ, ವೈವಾಹಿಕ ಪ್ರಕರಣ, ಭೂಸ್ವಾಧೀನ, ವೇತನ ಮತ್ತು ಭತ್ಯೆ, ಪಿಂಚಣಿ, ಕಂದಾಯ, ರೇರಾ ಪ್ರಕರಣಗಳನ್ನು ರಾಜೀ ಮೂಲಕ ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇಕಡ 50ರಷ್ಟು ದಂಡಪಾವತಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೂಡ ಅವಕಾಶ ಕಲ್ಪಿಸಲಾಗಿದೆ.