alex Certify ಕೋರ್ಟ್ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಬಯಸುವವರಿಗೆ ಗುಡ್ ನ್ಯೂಸ್: ಡಿ. 9 ರಾಜ್ಯಾದ್ಯಂತ ಏಕಕಾಲಕ್ಕೆ ರಾಷ್ಟ್ರೀಯ ಲೋಕ್ ಅದಾಲತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋರ್ಟ್ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಬಯಸುವವರಿಗೆ ಗುಡ್ ನ್ಯೂಸ್: ಡಿ. 9 ರಾಜ್ಯಾದ್ಯಂತ ಏಕಕಾಲಕ್ಕೆ ರಾಷ್ಟ್ರೀಯ ಲೋಕ್ ಅದಾಲತ್

ಬೆಂಗಳೂರು: ರಾಜ್ಯಾದ್ಯಂತ ಡಿ. 9ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳುವ ಈ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು.

ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಬಯಸಿದಲ್ಲಿ ಮೊದಲೇ ಸಂಬಂಧಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯ ದೇಗುಲ, ಮೊದಲನೇ ಮಹಡಿ, ಸಿದ್ದಯ್ಯ ರಸ್ತೆ, ಬೆಂಗಳೂರು ಅಥವಾ ಟೋಲ್ ಫ್ರೀ ಸಂಖ್ಯೆ 1800 425 90900, ದೂರವಾಣಿ 080 2211875, 22111730, www.kslsa.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...