ಕೊಪ್ಪಳ: ಮುಂಬರುವ ವಿಧಾನಸಭೆ ಲೋಕಸಭೆ, ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಯಲಬುರ್ಗಾದಲ್ಲಿ ನಡೆದ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಮರವಿಂಗಡಣೆ ಕಾರ್ಯ ನಡೆಯುವ ನಿರೀಕ್ಷೆ ಇದೆ. ಮಹಿಳೆಯರಿಗೆ ರಾಜಕೀಯವಾಗಿ ಶೇಕಡ 33 ರಷ್ಟು ಸ್ಥಾನ ನಿಗದಿ ಪಡಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಮಹಿಳೆಯರಿಗೆ ಶೇಕಡ 33 ರಷ್ಟು ಸ್ಥಾನ ನೀಡುವ ಬಗ್ಗೆ ಚುನಾವಣಾ ಆಯೋಗ ಕೂಡ ಮಾಹಿತಿ ಸಂಗ್ರಹಿಸಲು ಮುಂದಾಗಿದೆ. 2026ನೇ ಸಾಲಿನಿಂದಲೇ ಮಹಿಳಾ ಮೀಸಲು ಕ್ಷೇತ್ರಗಳು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಬಸವರಾಜ ರಾಯರೆಡ್ಡಿ ಮಾಹಿತಿ ನೀಡಿದ್ದಾರೆ.