ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಾಕಿ ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ನಾಯಕರು ಫೈನಲ್ ಮಾಡಿದ್ದಾರೆ.
ತೀವ್ರ ಪೈಪೋಟಿ ಇರುವ ಮತ್ತು ಆಕಾಂಕ್ಷಿಗಳು ಹೆಚ್ಚಾಗಿರುವ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರಗಳಿಗೆ ಎಐಸಿಸಿ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಕಾಂಗ್ರೆಸ್ ಎರಡು ಪಟ್ಟಿಯಲ್ಲಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಬಾಕಿ ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕೂಡ ಅಂತಿಮಗೊಳಿಸಿದೆ. ಕೋಲಾರ ಕ್ಷೇತ್ರಕ್ಕೆ ತಮ್ಮ ಅಳಿಯನಿಗೆ ಟಿಕೆಟ್ ಕೊಡುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಬೇಡಿಕೆ ಇಟ್ಟಿದ್ದಾರೆ. ಕೋಲಾರ ಕ್ಷೇತ್ರಕ್ಕೆ ಬಹುತೇಕ ಎಲ್. ಹನುಮಂತಯ್ಯ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಚಾಮರಾಜನಗರ ಕ್ಷೇತ್ರಕ್ಕೆ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್, ಚಿಕ್ಕಬಳ್ಳಾಪುರಕ್ಕೆ ರಕ್ಷ ರಾಮಯ್ಯ, ಬಳ್ಳಾರಿಗೆ ಶಾಸಕ ತುಕಾರಾಂ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ.