alex Certify ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ನಿರ್ಮಾಪಕರ ಸಾಥ್: ಹೋಬಳಿ ಮಟ್ಟದಲ್ಲಿ ಶಿವಣ್ಣ ಪ್ರಚಾರ: 400 ಪ್ರಚಾರ ಸಭೆಗೆ ಪ್ಲಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ನಿರ್ಮಾಪಕರ ಸಾಥ್: ಹೋಬಳಿ ಮಟ್ಟದಲ್ಲಿ ಶಿವಣ್ಣ ಪ್ರಚಾರ: 400 ಪ್ರಚಾರ ಸಭೆಗೆ ಪ್ಲಾನ್

ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗೆ ನಿರ್ಮಾಪಕರು ಸಾಥ್ ನೀಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಸ್ಪರ್ಧಿಸಿದ್ದು, ನಿರ್ಮಾಪಕರು ಬೆಂಬಲಿಸಿ ಇಂದು ಮಧ್ಯಾಹ್ನ 3 ಗಂಟೆಗೆ ನಟ ಶಿವರಾಜ್ ಕುಮಾರ್ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸದಲ್ಲಿ ಪ್ರೆಸ್ ಮೀಟ್ ನಡೆಯಲಿದೆ.

ಗೀತಾ ಶಿವರಾಜಕುಮಾರ್ ಅವರನ್ನು ಒಮ್ಮೆ ಸಂಸದೆಯಾಗಿ ನೋಡಬೇಕು ಎಂದು ನಟ ಶಿವಣ್ಣ ಹೇಳಿದ್ದರು. ಪತ್ನಿ ಗೀತಾ ಪರವಾಗಿ ಪ್ರಚಾರಕ್ಕೆ ಅವರು ಸಿದ್ಧವಾಗುತ್ತಿದ್ದಾರೆ. ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೋಬಳಿ ಮಟ್ಟದಲ್ಲಿ ಶಿವಣ್ಣ ಪ್ರಚಾರ ನಡೆಸಲಿದ್ದಾರೆ. ತಾಲೂಕು ಮಟ್ಟದ ಸಭೆಗಳಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆಂದು ಹೇಳಲಾಗಿದೆ.

ಗೀತಾ ಶಿವರಾಜಕುಮಾರ್ ಮಾ. 20 ರಂದು ಶಿವಮೊಗ್ಗಕ್ಕೆ ಆಗಮಿಸಿ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400 ಸಭೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...