alex Certify ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಗ್ಗೆ ವಾರದೊಳಗೆ ನಿರ್ಧಾರ: ಜಯಪ್ರಕಾಶ್ ಹೆಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಗ್ಗೆ ವಾರದೊಳಗೆ ನಿರ್ಧಾರ: ಜಯಪ್ರಕಾಶ್ ಹೆಗಡೆ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಒಂದು ವಾರದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗಡೆ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಾದ ಕೂಡಲೇ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸಹಜವಾಗಿ ರದ್ದಾಗಿದ್ದು, ಮತ್ತೆ ಬಿಜೆಪಿ ಸದಸ್ಯತ್ವ ಪಡೆದುಕೊಂಡಿಲ್ಲ. ಪ್ರಸ್ತುತ ನಾನು ಯಾವುದೇ ಪಕ್ಷದ ಸದಸ್ಯನಲ್ಲ ಎಂದು ಹೇಳಿದ್ದಾರೆ.

ಯಾವುದೇ ಪಕ್ಷ ಸೇರುವ ಕುರಿತು ಮತ್ತು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇನ್ನು ನಿರ್ಧಾರ ಕೈಗೊಂಡಿಲ್ಲ. ಕುಟುಂಬದವರು, ಆಪ್ತರೊಂದಿಗೆ ಚರ್ಚಿಸಿ ವಾರದೊಳಗೆ ನಿರಂತರ ಕೈಗೊಳ್ಳುತ್ತೇನೆ. ಯಾವುದೇ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅಧಿಕೃತ ಆಹ್ವಾನ ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...