alex Certify 2ನೇ ಹಂತದ ಲೋಕಸಭೆ ಚುನಾವಣೆ: 14 ಕ್ಷೇತ್ರಗಳಲ್ಲಿ 337 ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2ನೇ ಹಂತದ ಲೋಕಸಭೆ ಚುನಾವಣೆ: 14 ಕ್ಷೇತ್ರಗಳಲ್ಲಿ 337 ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯವಾಗಿದೆ. ಕೊನೆಯ ದಿನ 137 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 337 ನಾಮಪತ್ರ ಸಲ್ಲಿಕೆಯಾಗಿವೆ.

ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದೆ.

ಅಧಿಸೂಚನೆ ಪ್ರಕಟವಾದಾಗಿನಿಂದ 337 ಅಭ್ಯರ್ಥಿಗಳು 503 ನಾಮಪತ್ರ ಸಲ್ಲಿಸಿದ್ದಾರೆ. 337 ಅಭ್ಯರ್ಥಿಗಳಲ್ಲಿ 309 ಪುರುಷರು, 28 ಮಹಿಳೆಯರು ಇದ್ದಾರೆ. 14 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯಿಂದ 56, ಕಾಂಗ್ರೆಸ್ ನಿಂದ 54, ಆಮ್ ಆದ್ಮಿ ಪಕ್ಷದಿಂದ 1, ಬಿಎಸ್ಪಿ 18, ಜೆಡಿಎಸ್ ಪಕ್ಷದಿಂದ ಒಂದು ಉಮೇದುವಾರಿಕೆ ಸಲ್ಲಿಕೆಯಾಗಿದೆ. ಮಾನ್ಯತೆ ಪಡೆದ ನೋಂದಾಯಿತ ರಾಜಕೀಯ ಪಕ್ಷಗಳಿಂದ 143, ಪಕ್ಷೇತರರಿಂದ 230 ನಾಮಪತ್ರ ಸಲ್ಲಿಕೆಯಾಗಿದೆ.

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೀದರ್, ಬಾಗಲಕೋಟೆ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...