ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಏಪ್ರಿಲ್ 5 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಿಸಲಾಗುವುದು.
ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತ, ಮೇ 7 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಉಡುಪಿ –ಚಿಕ್ಕಮಗಳೂರು
ಚಿಕ್ಕಬಳ್ಳಾಪುರ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಹಾಸನ
ಮಂಡ್ಯ
ಚಾಮರಾಜನಗರ
ಮೈಸೂರು -ಕೊಡಗು
ಕೋಲಾರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಇವುಗಳಲ್ಲಿ ಚಾಮರಾಜನಗರ, ಕೋಲಾರ, ಚಿತ್ರದುರ್ಗ ಎಸ್ಸಿ ಮೀಸಲು ಕ್ಷೇತ್ರಗಳಾಗಿದ್ದು, ಉಳಿದವು ಸಾಮಾನ್ಯ ಕ್ಷೇತ್ರಗಳಾಗಿವೆ.