alex Certify ನಾಳೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಏಪ್ರಿಲ್ 5 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಿಸಲಾಗುವುದು.

ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತ, ಮೇ 7 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಉಡುಪಿ –ಚಿಕ್ಕಮಗಳೂರು

ಚಿಕ್ಕಬಳ್ಳಾಪುರ

ದಕ್ಷಿಣ ಕನ್ನಡ

ಚಿತ್ರದುರ್ಗ

ತುಮಕೂರು

ಹಾಸನ

ಮಂಡ್ಯ

ಚಾಮರಾಜನಗರ

ಮೈಸೂರು -ಕೊಡಗು

ಕೋಲಾರ

ಬೆಂಗಳೂರು ಗ್ರಾಮಾಂತರ

ಬೆಂಗಳೂರು ಕೇಂದ್ರ

ಬೆಂಗಳೂರು ದಕ್ಷಿಣ

ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಇವುಗಳಲ್ಲಿ ಚಾಮರಾಜನಗರ, ಕೋಲಾರ, ಚಿತ್ರದುರ್ಗ ಎಸ್ಸಿ ಮೀಸಲು ಕ್ಷೇತ್ರಗಳಾಗಿದ್ದು, ಉಳಿದವು ಸಾಮಾನ್ಯ ಕ್ಷೇತ್ರಗಳಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...