alex Certify ರಾಜ್ಯದಲ್ಲಿ ಮಾ. 15ರಿಂದ ಲೋಕಸಭೆ ಚುನಾವಣೆಗೆ ಮೋದಿ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮಾ. 15ರಿಂದ ಲೋಕಸಭೆ ಚುನಾವಣೆಗೆ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 15 ರಿಂದ ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಮಾರ್ಚ್ 15ರಿಂದ ರಾಜ್ಯದಲ್ಲಿ ಮೋದಿ ಪ್ರಚಾರ ಆರಂಭವಾಗಲಿದೆ. ಮಾರ್ಚ್ 15 ರಂದು ಬೆಳಗ್ಗೆ 10 ಗಂಟೆಗೆ ದೇವನಹಳ್ಳಿಗೆ ಆಗಮಿಸಲಿರುವ ಪ್ರಧಾನಿ ನಂತರ ಚಿಕ್ಕಬಳ್ಳಾಪುರಕ್ಕೆ ತೆರಳಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಮಾರ್ಚ್ 16ರಂದು ಕಲಬುರಗಿಯಲ್ಲಿ ಬಹಿರಂಗ ಸಭೆ, ಮಾರ್ಚ್ 17ರಂದು ಶಿವಮೊಗ್ಗದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸುವರು.

ಮಾ 17 ರಂದು ಬೆಳಗ್ಗೆ ಕೇರಳದಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದಾರೆ. ನಂತರ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ –ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಕ್ಷೇತ್ರ ವ್ಯಾಪ್ತಿಗೆ ಶಿವಮೊಗ್ಗದಲ್ಲಿ ಸಮಾವೇಶ ನಿಗದಿ ಮಾಡಲಾಗಿದೆ. ಶಿವಮೊಗ್ಗ, ಕೋಲಾರ, ಬೀದರ್, ಧಾರವಾಡದಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...