ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ವಾರದೊಳಗೆ ಘೋಷಣೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಹೊಸಬರಿಗೆ, ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಲಾಗುತ್ತಿದೆ. 28 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಒಂದು ವಾರದಲ್ಲಿ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಚರ್ಚೆ ನಡೆದಿದೆ. ಆದರೆ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ನಾನು ಸ್ಪರ್ಧೆ ಮಾಡುತ್ತಿಲ್ಲ. ಒತ್ತಡ ಹಾಕಿದರೂ ಕೂಡ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರಿ ಪ್ರಿಯಾಂಕ ಕೂಡ ಕಣಕ್ಕಿಳಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.