ನವದೆಹಲಿ: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ತಾಲೀಮು ಆರಂಭಿಸಿದ್ದು, ಈಗ ಚುನಾವಣೆ ನಡೆದಲ್ಲಿ ರಾಜ್ಯದಲ್ಲಿ ಬಿಜೆಪಿ 21, ಕಾಂಗ್ರೆಸ್ 5, ಜೆಡಿಎಸ್ ಎರಡು ಸ್ಥಾನದಲ್ಲಿ ಜಯಗಳಿಸಲಿವೆ ಎಂದು ಸಮೀಕ್ಷೆಯಲ್ಲಿ ಗೊತ್ತಾಗಿದೆ.
ಟೈಮ್ಸ್ ನೌ, ಮ್ಯಾಟ್ರಿಜ್ ಸಮೀಕ್ಷಾ ವರದಿ ಬಿಡುಗಡೆ ಮಾಡಿದ್ದು, 21 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲಿದ್ದು, ಆಡಳಿತಾರೂಢ ಕಾಂಗ್ರೆಸ್ 5 ಸ್ಥಾನ, ಬಿಜೆಪಿಯೊಂದಿಗೆ ಮೈತ್ರಿ ಘೋಷಿಸಿದ ಜೆಡಿಎಸ್ ಎರಡು ಸ್ಥಾನ ಗಳಿಸಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್ 1, ಪಕ್ಷೇತರರು ಒಂದು ಸ್ಥಾನ ಗಳಿಸಿದ್ದರು.