alex Certify BIG NEWS : ಲೋಕಸಭೆ ಚುನಾವಣೆ ಮತ ಎಣಿಕೆ ; ಜೂ. 4 ರಂದು ಬೆಂಗಳೂರಲ್ಲಿ ‘ನಿಷೇಧಾಜ್ಞೆ’ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಲೋಕಸಭೆ ಚುನಾವಣೆ ಮತ ಎಣಿಕೆ ; ಜೂ. 4 ರಂದು ಬೆಂಗಳೂರಲ್ಲಿ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆ ಜೂ. 4 ರಂದು ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ.26 ಮತ್ತು ಮೇ 7 ರಲ್ಲಿ ಎರಡು ಹಂತದ ಚುನಾವಣೆ ನಡೆದಿತ್ತು. ಜೂನ್ 4 ರಂದು ಮತ ಎಣಿಕೆ ನಡೆಯುವ ಹಿನ್ನೆಲೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು, 5 ಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಬ್ಯಾನರ್, ಪೋಸ್ಟರ್ ಹಾಕುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...