ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ.
ಪ್ರಮುಖ ದಿನಾಂಕಗಳು
• ನಾಮಪತ್ರಗಳನ್ನು ಸಲ್ಲಿಸಲು : ಏಪ್ರಿಲ್ 4 ಕೊನೆಯ ದಿನವಾಗಿದೆ.
• ನಾಮಪತ್ರ ಪರಿಶೀಲನೆ : ಏಪ್ರಿಲ್ 5
• ನಾಮಪತ್ರ ಹಿಂಪಡೆಯಲು : ಏಪ್ರಿಲ್ 8 ಕೊನೆಯ ದಿನಾಂಕ
• ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.
• ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ
• ಮತಗಳ ಎಣಿಕೆ ಮತ್ತು ಫಲಿತಾಂಶ : ಜೂನ್ 4 ರಂದು
ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ
ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.
ಮೇ 7 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮತದಾನ
ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.