ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ವೋಟಿಂಗ್ ನಡೆಯಲಿದೆ.
ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ಕ್ಕೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 58,834 ಮತಗಟ್ಟೆಗಳಿದ್ದು, 5 ಕೋಟಿಯ 42 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.
ಲೋಕಸಭೆ ಚುನಾವಣೆ ಎದುರಿಸಲು ರಾಜ್ಯ ಸಜ್ಜಾಗಿದ್ದು, ಸುಮಾರು ಐದೂವರೆ ಕೋಟಿ ಮತದಾರರು 28 ಸಂಸದರನ್ನು ಆಯ್ಕೆ ಮಾಡಲಿದ್ದಾರೆ. ಅದಕ್ಕಾಗಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ರಾಜ್ಯದ 28 ಕ್ಷೇತ್ರಗಳನ್ನು ಎರಡು ಭಾಗಗಳಾಗಿ ವಿಭಜಿಸಲಾಗಿದ್ದು, ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಚುನಾವಣೆ ನಡೆಯಲಿದೆ.