
ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.
ಏಪ್ರಿಲ್ 19ರಿಂದ ಆರಂಭವಾಗಲಿರುವ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಬ್ಯಾಂಕ್ ಗಳಿಗೆ ಮಹತ್ವದ ನಿರ್ದೇಶನ ನೀಡಿದೆ.
ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಬೇಕು. ಎಲ್ಲಾ ಬ್ಯಾಂಕ್ ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಸೂಚಿಸಿದ್ದಾರೆ.