alex Certify BIG NEWS : ಲೋಕಸಭಾ ಚುನಾವಣೆ ; ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಲೋಕಸಭಾ ಚುನಾವಣೆ ; ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು 2 ಹಂತದಲ್ಲಿ ಮತದಾನ ನಡೆಯಲಿದೆ. ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ

ಏ.28 ರಿಂದ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ನಾಳೆ(ಗುರುವಾರ)ಯಿಂದ ಆರಂಭಗೊಳ್ಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಸೂಚನೆ ಪ್ರಕಟವಾಗಲಿದೆ. ಮೊದಲ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕಡೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ.

ಪ್ರಮುಖ ದಿನಾಂಕಗಳು

• ನಾಮಪತ್ರಗಳನ್ನು ಸಲ್ಲಿಸಲು : ಏಪ್ರಿಲ್ 4 ಕೊನೆಯ ದಿನವಾಗಿದೆ.
• ನಾಮಪತ್ರ ಪರಿಶೀಲನೆ : ಏಪ್ರಿಲ್ 5
• ನಾಮಪತ್ರ ಹಿಂಪಡೆಯಲು : ಏಪ್ರಿಲ್ 8 ಕೊನೆಯ ದಿನಾಂಕ
• ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.
• ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ
• ಮತಗಳ ಎಣಿಕೆ ಮತ್ತು ಫಲಿತಾಂಶ : ಜೂನ್ 4 ರಂದು
ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ
ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.

ಮೇ 7 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮತದಾನ

ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...