alex Certify BIG NEWS: ಲೋಕಸಭಾ ಚುನಾವಣೆ: ಚುನಾವಣಾ ಸಿಬ್ಬಂದಿಗಳಿಂದ ಅಂಚೆ ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭಾ ಚುನಾವಣೆ: ಚುನಾವಣಾ ಸಿಬ್ಬಂದಿಗಳಿಂದ ಅಂಚೆ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಇಂದು ಚುನವಣಾ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತಗಟ್ಟೆಗೆ ತೆರಳುವ ಮುನ್ನ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮಸ್ಟರಿಂಗ್ ಕೇಂದ್ರಗಳಲ್ಲಿ ಚುನವಣಾ ಸಿಬ್ಬಂದಿಗಳು ಅಂಚೆ ಮತದಾನದ ಮೂಲಕ ಮತ ಚಲಾಯಿಸಿದ್ದಾರೆ. ಆಯಾ ಮತಗಟ್ಟೆಗಳಿಗೆ ತೆರಳುವ ಮುನ್ನ ಮತದಾನ ಮಾಡಿ ತೆರಳುವಂತೆ ಚುನವಣಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಚುನಾವಣಾ ಸಿಬ್ಬಂದಿಗಳಿಗಾಗಿಯೇ ಪ್ರತ್ಯೇಕ ಕೊಠಡಿ ಸ್ಥಾಪಿಸಿ ಅಂಚೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಬಂದು ಮತದಾನ ಮಾಡುತ್ತಿದ್ದ ದೃಶ್ಯ ಗಮನ ಸೆಳೆಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...