ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಮಾ.9 ಅಥವಾ 10 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ . ವಿಧಾನಸಭಾ ಚುನಾವಣೆಗೆ ನಾವು ಬೇಗ ಪಟ್ಟಿ ಬಿಡುಗಡೆ ಮಾಡಿದ್ದೆವು, 29 ಲೋಕಸಭಾ ಕ್ಷೇತ್ರಗಳಿಗೆ ಪಟ್ಟಿ ಸಿದ್ದವಾಗಿದೆ, ಕೆಲವು 4-5 ಕ್ಷೇತ್ರಗಳಲ್ಲಿ ಗೊಂದಲವಿರಬಹುದು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿದೆ, ಮಾ.9 ಅಥವಾ 10 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ಮೊದಲ ಪಟ್ಟಿಯಲ್ಲೇ ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಸೆಂಟ್ರಲ್, ಬೆಂಗಳೂರು ಉತ್ತರ, ಉಡುಪಿ- ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ಸಾಧ್ಯತೆ ಇದೆ.