alex Certify BIG BREAKING NEWS: ಲೋಕಸಭೆಯಲ್ಲಿ ವಿಪಕ್ಷಗಳ ಕಾಲೆಳೆದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಲೋಕಸಭೆಯಲ್ಲಿ ವಿಪಕ್ಷಗಳ ಕಾಲೆಳೆದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಬಗ್ಗೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ.

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ಲತಾ ಮಂಗೇಶ್ಕರ್ ನಿಧನದಿಂದ ಭಾರತದ ದನಿಯನ್ನೇ ಕಳೆದುಕೊಂಡಂತಾಗಿದೆ. ಹಲವು ಭಾಷೆಗಳಲ್ಲಿ ಅವರು ಹಾಡುಗಳನ್ನು ಹಾಡಿದ್ದರು. ಕೊರೋನಾ ನಂತರ ವಿಶ್ವ ಹೊಸತನದತ್ತ ಮುನ್ನಡೆಯುತ್ತಿದೆ. ಭಾರತ ನಾಯಕತ್ವದ ಪಾತ್ರವನ್ನು ನಿರ್ವಹಿಸಲಿದೆ. ಹಲವು ವಲಯಗಳಲ್ಲಿ ನಾವು ಮುನ್ನಡೆಯುತ್ತಿದ್ದೇವೆ. ಇದರಿಂದ ನಾವೆಲ್ಲರೂ ಹೆಮ್ಮೆ ಪಡುವಂತಾಗಿದೆ ಎಂದು ಹೇಳಿದ್ದಾರೆ.

ಬಡವರ ಸಂತಸ ದೇಶದ ಶಕ್ತಿಯನ್ನು ಹೆಚ್ಚಿಸಿದೆ. ಬಡವರ ಮನೆಗಳಿಗೆ ಶೌಚಾಲಯ, ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಬಡವರು ಬ್ಯಾಂಕ್ ಖಾತೆ ತೆರೆಯುವಂತಾಗಿದೆ. ಬಡವರ ಮನೆಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. 2014 ರವರೆಗೆ ಜನರಿಗೆ ಯೋಜನೆಗಳು ತಲುಪುತ್ತಿರಲಿಲ್ಲ. 50 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತವನ್ನು ನಡೆಸಿದೆ ಎಂದರು.

ಒಡಿಶಾದಲ್ಲಿ ಕಾಂಗ್ರೆಸ್ ಗೆದ್ದಿದ್ದು 1995 ರಲ್ಲಿ, ಗೋವಾದಲ್ಲಿ 1994 ರಲ್ಲಿ, ತ್ರಿಪುರಾದಲ್ಲಿ 1984 ರಲ್ಲಿ ಕೊನೆ ಬಾರಿ ಕಾಂಗ್ರೆಸ್ ಗೆದ್ದಿತ್ತು. ತಮಿಳುನಾಡು, ಆಂಧ್ರದಲ್ಲಿ ಕಾಂಗ್ರೆಸ್ ಗೆ ಅವಕಾಶ ಇಲ್ಲ ಎಂದು ಕಾಂಗ್ರೆಸ್ ಕಾಲೆಳೆದಿದ್ದಾರೆ.

ಉತ್ತರಪ್ರದೇಶ, ಬಿಹಾರ, ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಪ್ರತ್ಯೇಕ ರಾಜ್ಯ ಮಾಡಿದ್ದರೂ ಆ ಪಕ್ಷವನ್ನು ಜನತೆ ತಿರಸ್ಕರಿಸಿದ್ದಾರೆ. ಇದು ಚುನಾವಣಾ ಫಲಿತಾಂಶದ ಪ್ರಶ್ನೆ ಅಲ್ಲ, ಜನರ ಉದ್ದೇಶ ಏನೆಂಬುದು ಮುಖ್ಯವಾಗಿದೆ ಎಂದರು.

ಬಿಜೆಪಿ ಒಂದು ಚುನಾವಣೆ ಸೋತರೆ ಅದನ್ನೇ ಹೇಳುತ್ತೀರಿ. ನೀವು ಎಷ್ಟು ಬಾರಿ ಸೋತಿದ್ದೀರಿ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ವಿಚಾರವನ್ನು ವಿರೋಧ ಮಾಡುವುದು ಸರಿಯಲ್ಲ. 2014ರಿಂದ ಹೊರಬಂದು ದೇಶವನ್ನು ನೋಡಿ. ಮುಂದಿನ ದಿನಗಳಲ್ಲಾದರೂ ಬದಲಾವಣೆ ನೋಡಿ. ಉಪದೇಶ ಕೊಡುವ ನೀವು 50 ವರ್ಷ ದೇಶವನ್ನು ಏನು ಮಾಡಿದ್ದೀರಿ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಬಹುಮತ ಗಳಿಸಿದ್ದ ರಾಜ್ಯಗಳು ಕಾಂಗ್ರೆಸ್ ಕೈ ತಪ್ಪಿವೆ. ಕಾಂಗ್ರೆಸ್ ಪಕ್ಷವನ್ನು ರಾಜ್ಯಗಳು ತಿರಸ್ಕರಿಸುತ್ತಿವೆ. ಸದನದಲ್ಲಿ ಅನವಶ್ಯಕ ಗದ್ದಲ ಎಬ್ಬಿಸಬೇಡಿ. ಭಾರತ ಇಂದು ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...