
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ 411 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಿಎನ್ಎನ್ ನ್ಯೂಸ್ 18 ನಡೆಸಿದ ಚುನಾವಣೆ ಪೂರ್ವ ಸಮೀಕ್ಷೆ ಹೇಳಿದೆ.
543 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ 411 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಇಂಡಿಯಾ ಮೈತ್ರಿಕೂಟ 105 ಸ್ಥಾನ ಪಡೆಯಲಿದ್ದು, ಇತರರು 27 ಸ್ಥಾನ ಗಳಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370, ಎನ್.ಡಿ.ಎ. ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಿವೆ.
ಕರ್ನಾಟಕದ ಒಟ್ಟು 28 ಕ್ಷೇತ್ರಗಳಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿಕೂಟ 25 ಸ್ಥಾನ ಪಡೆಯಲಿವೆ. ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಿಎನ್ಎನ್ ನ್ಯೂಸ್ 18 ಸಮೀಕ್ಷೆ ತಿಳಿಸಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಪ್ರಸ್ತುತ ಬಿಜೆಪಿ 25, ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರ ಒಬ್ಬರು ಸದಸ್ಯರಿದ್ದಾರೆ.