ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಮಾರ್ಚ್ 14 ರಂದು ಗುರುವಾರ ಅಥವಾ ಮಾರ್ಚ್ 15ರ ಶುಕ್ರವಾರ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಲೋಕಸಭೆ ಚುನಾವಣೆಯ ಸಿದ್ಧತೆ ಪರಿಶೀಲಿಸಲು ಚುನಾವಣಾ ಆಯೋಗ ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಬುಧವಾರ ವಾಪಸ್ಸಾಗಲಿದ್ದು, ಇದಾದ ನಂತರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮಾರ್ಚ್ 13ರ ಬುಧವಾರದೊಳಗೆ ವಿವಿಧ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಲು ಕೇಂದ್ರದ ವಿವಿಧ ಸಚಿವಾಲಯಗಳು ಕ್ರಮ ಕೈಗೊಂಡಿವೆ. ಚುನಾವಣೆ ಘೋಷಣೆಯಾದ ಕೂಡಲೇ ಮಾದರಿ ನೀತಿ ಸಮಿತಿ ಜಾರಿಗೆ ಬರುವುದರಿಂದ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಕ್ರಮ ಮಾಡಲು ಅವಕಾಶ ಇರುವುದಿಲ್ಲ. ಹೀಗಾಗಿ ಕಾಮಗಾರಿಗಳಿಗೆ ತರಾತುರಿ ಚಾಲನೆ ನೀಡಲಾಗುತ್ತಿದೆ.
ಕೊನೆಯದಾಗಿ ಚುನಾವಣಾ ಆಯೋಗ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಬಹುತೇಕ ಮಾರ್ಚ್ 14 ಅಥವಾ 15ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.