ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಕುರಿತ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ನೀಡಿದೆ.
ಲೋಕಸಭೆ ಚುನಾವಣೆಯಲ್ಲಿ ಮದ್ಯ ಖರೀದಿಗೆ ವಾಲ್ಮೀಕಿ ನಿಗಮದ ಹಣ ಬಳಸಿರುವುದು ಕಂಡು ಬಂದಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ತಿಳಿಸಿದೆ. ಚುನಾವಣೆ ಸಂದರ್ಭದಲ್ಲಿ ಮದ್ಯ ಖರೀದಿಗೆ ಹಣ ಬಳಕೆ ಮಾಡಲಾಗಿದೆ. ಲ್ಯಾಂಬೋರ್ಗಿನಿ ಕಾರ್ ಖರೀದಿಗೆ ಹಣ ವೆಚ್ಚ ಮಾಡಿರುವುದು ಗೊತ್ತಾಗಿದೆ.
ಮಾಜಿ ಸಚಿವ ಬಿ. ನಾಗೇಂದ್ರ, ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ನಡೆಸಿದ ವೇಳೆ ಅಕ್ರಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿರುವ ಕುರಿತ ದಾಖಲೆಗಳು ದೊರೆತಿವೆ ಎಂದು ಹೇಳಲಾಗಿದ್ದು, ಪ್ರಕರಣದಲ್ಲಿ ಯಾವುದೇ ಸಚಿವರು, ಶಾಸಕರು ಭಾಗಿಯಾಗಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಇರುಸು ಮುರುಸು ತಂದಿದೆ.