ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಲೋಕಸಭೆ ಚುನಾವಣೆ ಇಂದಿನಿಂದ ಆರಂಭವಾಗಲಿದೆ, ಮೊದಲ ಹಂತದಲ್ಲಿ ಏಪ್ರಿಲ್ 19ರಂದು 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಮೊದಲ ಹಂತದಲ್ಲಿ ಅಂಡಮಾನ್ ಮತ್ತು ನಿಕೋಬಾರ್, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ದೆಹಲಿ, ಹಿಮಾಚಲ ಪ್ರದೇಶ, ಗೋವಾ, ಗುಜರಾತ್, ಕೇರಳ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ಸೇರಿ ವಿವಿಧ ರಾಜ್ಯಗಳ 102 ಕ್ಷೇತ್ರಗಳಿಗೆ ಚುನಾವಣಾ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ.
ಮಾರ್ಚ್ 27ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಮಾರ್ಚ್ 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾರ್ಚ್ 20 ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಘೋಷಣೆಯಾಗಲಿದೆ.
ಏಪ್ರಿಲ್ 26ರಂದು ಎರಡನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13 ರಂದು ನಾಲ್ಕನೇ ಹಂತ, ಮೇ 20ರಂದು ಐದನೇ ಹಂತ, ಮೇ 25 ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದೆ.