ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.
ಕಳೆದ ಗುರುವಾರದವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಒಟ್ಟು 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದಾರೆ. ಇವುಗಳಲ್ಲಿ 300 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಉಳಿದ ನಾಮಪತ್ರಗಳು ತಿರಸ್ಕೃತಗೊಂಡಿವೆ. ಏಪ್ರಿಲ್ 8 ಸೋಮವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಸಂಜೆಯೊಳಗೆ 14 ಕ್ಷೇತ್ರಗಳಲ್ಲಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಗಲಿದೆ.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಹಾಸನ, ಮೈಸೂರು –ಕೊಡಗು, ದಕ್ಷಿಣ ಕನ್ನಡ, ಉಡುಪಿ –ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ.