alex Certify ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟಿಸಲಾಗುವುದು.

ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ –ಚಿಕ್ಕಮಗಳೂರು, ಹಾಸನ, ಮಂಡ್ಯ, ಚಿತ್ರದುರ್ಗ, ಮೈಸೂರು –ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...