
ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳ 8360 ಅಭ್ಯರ್ಥಿಗಳ ಭವಿಷ್ಯ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.
ಸುದೀರ್ಘ ಎರಡೂವರೆ ತಿಂಗಳ ಕಾಲ ನಡೆದ ಲೋಕಸಭೆಯ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ ಬೀಳಲಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಸಮೀಕ್ಷೆಗಳು ಸುಳ್ಳಾಗಲಿದ್ದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಮೈತ್ರಿಕೂಟದ ನಾಯಕರು ವಿಶ್ವಾಸದಲ್ಲಿದ್ದಾರೆ.
ಯಾರಿಗೆ ಎಷ್ಟು ಸ್ಥಾನ ಸಿಗಲಿದೆ ಎಂಬ ಕುತೂಹಲಕ್ಕೆ ಮಧ್ಯಾಹ್ನದೊಳಗೆ ತೆರೆ ಬೀಳಲಿದೆ. ಇಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಇದೇ ವೇಳೆ ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶ ಕೂಡ ಪ್ರಕಟವಾಗಲಿದೆ.