ಬೆಂಗಳೂರು: ದೇಶದಲ್ಲಿ ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಜ್ಯದಲ್ಲಿಯೂ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ 474 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಸಮೀಕ್ಷೆಗಳು ಸುಳ್ಳಾಗಲಿದ್ದು ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲಿದೆ ಎನ್ನುವ ವಿಶ್ವಾಸ ಪಕ್ಷದ ನಾಯಕರಲ್ಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಇದಕ್ಕೂ ಮೊದಲು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗುವುದು. ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಲಿದೆ. ನಂತರ ಇವಿಎಂ ಮತಗಳ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಯಾರಿಗೆ ಗೆಲುವು ಎನ್ನುವ ಕುತೂಹಲಕ್ಕೆ ತೆರೆ ಬೀಳಲಿದೆ.