alex Certify ಕೊನೆ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊನೆ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಹಾಗೂ 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾಗಿದೆ. ಇದರೊಂದಿಗೆ ಸುಧೀರ್ಘ ಎರಡೂವರೆ ತಿಂಗಳ ಕಾಲ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

7ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇಕಡ 61 ರಷ್ಟು ಮತದಾನವಾಗಿದೆ. ಉತ್ತರ ಪ್ರದೇಶ, ಪಂಜಾಬ್, ಹಿಮಾಚಲ ಪ್ರದೇಶ, ಚಂಡೀಗಡ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಜಾರ್ಖಂಡ್ ರಾಜ್ಯಗಳ ಒಟ್ಟು 57 ಲೋಕಸಭಾ ಕ್ಷೇತ್ರಗಳಿಗೆ ಕೊನೆ ಹಂತದಲ್ಲಿ ಶನಿವಾರ ಮತದಾನ ನಡೆದಿದೆ. ಜನ ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದು, ಶೇ. 61 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...