ಉಗ್ರಪ್ಪಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್: ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಶಾಸಕ ತುಕಾರಾಮ್ ಸ್ಪರ್ಧೆ ಫಿಕ್ಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಶಾಸಕ ತುಕಾರಾಂ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ತುಕಾರಾಂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸುವುದು ಫಿಕ್ಸ್ ಆಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಕಾರಾಮ್ ಮನವೊಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ತುಕಾರಾಮ್ ಸ್ಪರ್ಧೆಗೆ ಒಪ್ಪಿದ್ದಾರೆ ಎನ್ನಲಾಗಿದೆ. ಭೇಟಿಯ ವೇಳೆ ಸಚಿವರಾದ ಸಂತೋಷ್ ಲಾಡ್ ಮತ್ತು ನಾಗೇಂದ್ರ ಉಪಸ್ಥಿತರಿದ್ದರು.

ಬಳ್ಳಾರಿ ಕ್ಷೇತ್ರದಲ್ಲಿ ವಿ.ಎಸ್. ಉಗ್ರಪ್ಪ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ತುಕಾರಾಮ್ ಸ್ಪರ್ಧೆಯಿಂದಾಗಿ ಉಗ್ರಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದಂತಾಗಿದೆ ಎಂದು ಹೇಳಲಾಗಿದೆ.

https://twitter.com/siddaramaiah/status/1770792470932054087

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read