ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರ ನಡೆಯಲಿದೆ. ಮಂಗಳವಾರ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಮೇ 7ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮತದಾನ ಮುಕ್ತಾಯವಾಗುವ 48 ಗಂಟೆಗಳ ಮೊದಲು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಳ್ಳಬಹುದು. ಮನೆ ಮನೆ ಮತಯಾಚನೆ ವೇಳೆ ಐದು ಮಂದಿಗಿಂತ ಹೆಚ್ಚು ಜನ ಸೇರುವಂತಿಲ್ಲ.
ಮೇ 7ರಂದು ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಳಗಾವಿ, ಚಿಕ್ಕೋಡಿ, ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ,