ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆ 7 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 102 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ.
21 ರಾಜ್ಯಗಳಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಲಿದೆ. ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಮಣಿಪುರ, ಛತ್ತೀಸ್ಗಢ, ಮೇಘಾಲಯ, ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸೇರಿದಂತೆ 21 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.
ಮೊದಲ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ನಿತಿನ್ ಗಡ್ಕರಿ, ಭೂಪೇಂದ್ರ ಯಾದವ್, ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಕನಿಮೋಳಿ, ಅಣ್ಣಾಮಲೈ, ತಮಿಳ್ ಸಾಯಿ ಸೌಂದರ್ ರಾಜನ್ ಸೇರಿದಂತೆ 9 ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರು ಕಣದಲ್ಲಿದ್ದಾರೆ.
ಇಂದು ಮತದಾನ ನಡೆಯಲಿರುವ 102 ಲೋಕಸಭಾ ಕ್ಷೇತ್ರಗಳ ಪೈಕಿ 2019ರಲ್ಲಿ ಯುಪಿಎ 45, ಎನ್.ಡಿ.ಎ. 41 ಸ್ಥಾನ ಗೆದ್ದಿತ್ತು. ಮೊದಲ ಹಂತದಲ್ಲಿ 16.63 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.