ಬೆಳಗಾವಿ: ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಚುನವಣಾ ಆಯೋಗ ಕಟ್ಟೆಚ್ಚರ ವಹಿಸಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಬೆಳಗಾವಿಯ ಚಿಕ್ಕೋಡಿ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ.
ಬೆಳಗಾವಿಯ ಗಡಿಗೆ ಹೊಂದಿಕೊಂಡಿರುವ ಬಾಚಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿ ಪ್ರಶಾಂತ್ ದೀಕ್ಷಿತ ಅವರ ತಂಡ 6.65 ಲಕ್ಷ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಅಮೂಲ್ ವಿದ್ಯಾಧರ ಎಂಬುವವರು ತಡರಾತ್ರಿ 12 ಗಂಟೆ ಸುಮಾರಿಗೆ 6.65 ಲಕ್ಷ ಹಣ ದಾಖಲೆ ಇಲ್ಲದೆ ಸಾಗಿಸುತ್ತಿದ್ದರು. ಬಾಚಿ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಹಣ ಪತ್ತೆ ಆಗಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.