ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ 16 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಬಸ್ ನಿಲ್ದಾಣದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ತಪಾಸಣೆ ನಡೆಸಿದಾಗ 16 ಲಕ್ಷ ನಗದು ಪತ್ತೆಯಾಗಿದೆ. ಸೂಕ್ತ ದಾಖಲೆಗಳು ಇರದ ಕಾರಣಕ್ಕೆ ಹಣ ವಶಕ್ಕೆ ಪಡೆಯಲಾಗಿದೆ.
ಇಚಲಕರಂಜಿ ಮೂಲದ ಸಂತೋಷ್ ಪೂಜಾರಿ ಹಾಗೂ ಜ್ಞಾನೇಶ್ವರ್ ಪಾಟಿಲ್ ಈ ಹಣವನ್ನು ಸಾಗಿಸುತ್ತಿದ್ದರು. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.