ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಉಭಯ ಪಕ್ಷಗಳ ನಾಯಕರು ಇಂದು ಚರ್ಚಿಸಲಿದ್ದಾರೆ.
ಸೀಟು ಹಂಚಿಕೆ ವಿಚಾರವಾಗಿ ಚರ್ಚಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮರಸ್ವಾಮಿ ಇಂದು ಸಂಜೆ ದೆಹಲಿಗೆ ತೆರಳಲಿದ್ದು, ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
5-7 ಸೀಟು ಉಳಿಸಿಕೊಳ್ಳಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒಲವು ಹೊಂದಿದ್ದಾರೆ. 7 ಕ್ಷೇತ್ರಗಳನ್ನು ಜೆಡಿಎಸ್ ಗೆ ನೀಡಬೇಕು ಎಂದು ಬೇಡಿಕೆ ಇಡುವ ಸಾಧ್ಯತೆ ಇದೆ. ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ 7 ಕ್ಷೇತ್ರ ಕೇಳುವ ಸಾಧ್ಯತೆ ದಟ್ಟವಾಗಿದ್ದು 5 ಕ್ಷೇತ್ರಕ್ಕಾಗಿ ಪಟ್ಟು ಹಿಡಿಯಬಹುದು ಎನ್ನಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ವಿಚಾರ ಇಂದು ಅಥವಾ ನಳೆ ಫೈನಲ್ ಆಗುವ ಸಾಧ್ಯತೆ ಇದೆ.