alex Certify BREAKING: ಮತಗಟ್ಟೆಯ ಮೇಲೆ ದಾಳಿ ನಡೆಸಿ ಇವಿಎಂ, ಕುರ್ಚಿ, ಮೇಜು ಪುಡಿ ಪುಡಿ ಮಾಡಿದ ಗ್ರಾಮಸ್ಥರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮತಗಟ್ಟೆಯ ಮೇಲೆ ದಾಳಿ ನಡೆಸಿ ಇವಿಎಂ, ಕುರ್ಚಿ, ಮೇಜು ಪುಡಿ ಪುಡಿ ಮಾಡಿದ ಗ್ರಾಮಸ್ಥರು

ಚಾಮರಾಜನಗರ: ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರನ್ನು ಮನವೊಲಿಸಲು ಯತ್ನಿಸಿ ಬಲವಂತದಿಂದ ಮತದಾನ ಮಾಡಿಸಿಲು ಯತ್ನಿಸಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥ ಮತಗಟ್ಟೆ ಮೇಲೆ ದಾಳಿ ನಡೆಸಿ, ಮತ ಯಂತ್ರ, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಘಟನೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದಿದೆ.

ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೌಲಸೌಕರ್ಯ ಕಲ್ಪಿಸುವವರೆಗೂ ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ 5 ಗ್ರಾಮಗಳ  ಗ್ರಾಮಸ್ಥರನ್ನು ಅಧಿಕಾರಿಗಳು ಮನವೊಲಿಸಿ ಮತಗಟ್ಟೆಯ ಬಳಿ ಕರೆತಂದಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಗ್ರಾಮದ ಮಹಿಳೆಯರು ಗುಂಪುಗೂಡಿ ಮತಗಟ್ಟೆ ಸುತ್ತ ನಿಂತಿದ್ದರು. ಇವರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಮತಗಟ್ಟೆಯ ಮೇಲೆ ದಾಳಿ ನಡೆಸಿ, ಮತಯಂತ್ರಗಳನ್ನು ಧ್ವಂಸ ಮಾಡಿದ್ದಾರೆ. ಮತಗಟ್ಟೆಯಲ್ಲಿದ್ದ ಕುರ್ಚಿ, ಮೇಜು ಪೀಠೋಪಕರಣಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು, ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೂ ಗಾಯಗಳಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ, ಹಲವು ಸರ್ಕಾರಗಳು ಬಂದರು ಈವರೆಗೂ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ವಿದ್ಯುತ್ ಸೌಕರ್ಯ, ನೀರಿನ ವ್ಯವಸ್ಥೆ ಇಲ್ಲ. ಗ್ರಾಮದ ಜನರು ಇಂದಿಗೂ ಕತ್ತಲೆಯಲ್ಲಿ ಕಾಲಕಳೆಯುತ್ತಿದ್ದಾರೆ. ಕುಡಿಯುವ ನೀರಿಗೂ ಸಂಕಷ್ಟವಿದೆ. ರಸ್ತೆ, ಶೌಚಾಲಯ, ಸಾರಿಗೆಸೌಕರ್ಯ ಯಾವುದೇ ಮೂಲಭೂತ ಸೌಕರ್ಯವೂ ಇಲ್ಲ ಇದರಿಂದ ನೊಂದ ಗ್ರಾಮಸ್ಥರು ಈಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...