ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿದೆ.
ಎಐಸಿಸಿ ಸಭೆಯಲ್ಲಿ ಭಾಗಿಯಾಗಿದ್ದ ಗೃಹ ಸಚಿವ ಪರಮೇಶ್ವರ್, ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವಾಗಬೇಕು. ಸೋಲಾದರೆ ರಾಜ್ಯದ ಸಚಿವರ ತಲೆದಂಡ ಮಾಡುವ ಎಚ್ಚರಿಕೆಯನ್ನು ಹೈಕಮಾಡ್ ನೀಡಿದೆ ಎಂದು ತಿಳಿಸಿದ್ದಾರೆ.
ಎರಡು ಮೂರು ದಿನಗಳಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಬಹುದು. ಅಭ್ಯರ್ಥಿಗಳ ಬಗ್ಗೆಯಾಗಲಿ ಅಥವಾ ಸಚಿವರ ಸ್ಪರ್ಧೆ ವಿಚಾರವಾಗಲಿ ಚರ್ಚೆಯಾಗಿಲ್ಲ. ಜವಾಬ್ದಾರಿ ತೆಗೆದುಕೊಂಡು ಒಗ್ಗಟ್ಟಿನಿಂದ ಚುನಾವಣಾ ಪ್ರಚಾರಮಾಡಬೇಕು ಎಂದಿದ್ದಾರೆ.
ಕ್ಷೇತ್ರಗಳಲ್ಲಿ ಸೂಕ್ತ ಫಲಿತಾಂಶ ಬರದಿದ್ದರೆ ಸಚಿವರ ತಲೆದಂಡ ಎಂದಿದ್ದಾರೆ. ಗೆಲ್ಲುವ ಕ್ಷೇತ್ರಗಳಲ್ಲಿ ಸೋತರೆ ಸರಿಯಾಗಿ ಕೆಲಸ ಮಾಡಿಲ್ಲ ಅಂತ ತಿಳಿದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ ಎಂದರು.